ಪಂಜದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಲ್.ಎನ್ .ತುಕಾರಾಂ ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿಗೆ ವರ್ಗಾವಣೆಗೊಂಡಿದ್ದು ಅವರಿಗೆ ಜೂ.10 ರಂದು ಪಂಜ ಗ್ರಾಮ ಪಂಚಾಯತ್ ವತಿಯಿಂದ ಬೀಳ್ಕೊಡುಗೆ-ಸನ್ಮಾನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಕಾರ್ಯದರ್ಶಿ ಕೆ ಪದ್ಮಯ್ಯ , ಸನ್ಮಾನ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿ ಎಲ್.ಎನ್ ತುಕಾರಾಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಲಿಗೋಧರ ಆಚಾರ್ಯ, ನಿರ್ದೇಶಕ ಚಿನ್ನಪ್ಪ ಗೌಡ ಚೊಟ್ಟೆಮಜಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಸದಸ್ಯರಾದ ಬಿ.ಲಕ್ಷ್ಮಣ ಗೌಡ ಬೊಳ್ಳಾಜೆ,ನಾರಾಯಣ ಕೃಷ್ಣನಗರ ಮಾತನಾಡಿದರು.ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಜಗದೀಶ್ ಪುರಿಯ,ಶ್ರೀಮತಿ ವೀಣಾ ಪಂಜ, ಶ್ರೀಮತಿ ಪ್ರಮೀಳಾ ಸಂಪ, ಶ್ರೀಮತಿ ವಿಜಯಲಕ್ಷ್ಮಿ ಕಲ್ಕ , ಪಾಂಡಿಗದ್ದೆ ಶಾಲೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕಂಬಳ,ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಕೆ ಪದ್ಮಯ್ಯ ಸ್ವಾಗತಿಸಿದರು ಮತ್ತು ವಂದಿಸಿದರು.