Breaking News

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ‌ಮತ್ತು ಮಾಹಿತಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಜೂನ್10ರಂದು 2022-23 ನೇ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕೆ ವಿ ಜಿ ಚಾರಿಟೇಬಲ್ ಟ್ರಸ್ಟ್ ನ ಆಡಳಿತ ಮುಖ್ಯಸ್ಥರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಪ್ರಧಾನ ಕಾರ್ಯದರ್ಶಿಗಳೂ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರು ಆದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

 

ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ಗುಣಮಟ್ಟದ ಶಿಕ್ಷಣದ ಮೇಲಿನ ನಂಬಿಕೆಯಿಂದ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿದ್ದಕ್ಕಾಗಿ ಹೆತ್ತವರಿಗೆ ಅಭಿನಂದನೆ ಸಲ್ಲಿಸಿದರು. ಉತ್ತಮ, ಅನುಭವಿ ಹಾಗೂ ನುರಿತ ಅಧ್ಯಾಪಕರು ಇರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಶಿಸ್ತುಬದ್ಧ ಶೈಕ್ಷಣಿಕ ವಾತಾವರಣ ನೀಡುವುದಾಗಿ ಭರವಸೆ ನೀಡಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ಡಾ. ಉಜ್ವಲ್ ಯು ಜೆ ಮಾತನಾಡಿ ಸುಳ್ಯ ತಾಲೂಕಿನ ಏಕೈಕ ಇಂಟಿಗ್ರೇಟೆಡ್ ಕಾಲೇಜು ಆದ ಅಮರಜ್ಯೋತಿ ಕಾಲೇಜಿನಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣದಿಂದಾಗಿ ಈ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ದುಪ್ಪಟ್ಟು ಏರಿಕೆಯಾಗಿರುವುದು ಕಾಲೇಜಿನ ಉನ್ನತಿಗೆ ಸಾಕ್ಷಿಯಾಗಿದೆ.

JEE/NEET ಹಾಗೂ CET ತರಬೇತಿ ಗಳಲ್ಲದೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ADVANCED TALLY ಕೋರ್ಸ್ ಕೂಡ ಪ್ರಾರಂಭವಾಗಿದ್ದು ಈ ಶೈಕ್ಷಣಿಕ ವರ್ಷದಲ್ಲಿ CA ಫೌಂಡೇಶನ್ ಕೋರ್ಸ್ ಕೂಡ ಪ್ರಾರಂಭವಾಗಲಿದೆ. ಪ್ರತಿದಿನವೂ ಈ ಎಲ್ಲಾ ತರಬೇತಿಗಳು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದ್ದು ಸುಳ್ಯ ದಂತಹ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ವರದಾನವಾಗಲಿದೆ ಎಂದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ವಿಟ್ಲದ ನಿವೃತ್ತ ಅಧ್ಯಾಪಕರು ಹಾಗೂ ಗೌಡ ಸಂಘದ ಗೌರವಾಧ್ಯಕ್ಷರಾದ ಲಿಂಗಪ್ಪ ಗೌಡರು ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನದ ಮಹತ್ವದ ಕುರಿತಂತೆ ಹಾಗೂ ಹೆತ್ತವರ ಜವಾಬ್ದಾರಿ ನಿರ್ವಹಣೆ ಬಗ್ಗೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಡಳಿತ ಮಂಡಳಿ ಸದಸ್ಯರಾದ ಸೂರಯ್ಯ ಗೌಡ ಹಾಗೂ ಪುತ್ತೂರಿನ ಪ್ರವೀಣ್ ಕುಂಟ್ಯಾನ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ ಆರ್ ಕಾಲೇಜಿನ ದೈನಂದಿನ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಶಿಸ್ತು ನಡವಳಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಉಪನ್ಯಾಸಕಿ ಶ್ರೀಮತಿ ಭವ್ಯ ರವರು JEE/NEET/CET ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ವಾಣಿಜ್ಯ ವಿದ್ಯಾರ್ಥಿಗಳ ಕುರಿತಂತೆ ಸನತ್ ಪೆರ್ವಾಡಿ ಮಾತನಾಡಿ Advanced Tally ಹಾಗೂ C A Foundation ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ನಿರ್ದೇಶಕರಾದ ಡಾ. ಜ್ಯೋತಿ ಆರ್ ಪ್ರಸಾದ್ ರವರು ನೂತನ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸಭಾಧ್ಯಕ್ಷತೆ ವಹಿಸಿದ್ದ ಡಾ. ಯಶೋದಾ ರಾಮಚಂದ್ರರವರು ಮಾತನಾಡಿ 7ನೇ ವರ್ಷಕ್ಕೆ ಪ್ರವೇಶ ಮಾಡಿರುವ ಅಮರಜ್ಯೋತಿ ಕಾಲೇಜು ಉತ್ತಮ ಫಲಿತಾಂಶದೊಂದಿಗೆ ಉಜ್ವಲ ಭವಿಷ್ಯದತ್ತ ದೃಢ ಹೆಜ್ಜೆಯನಿಡುತ್ತಿದ್ದು, ಸುಳ್ಯ ಮಾತ್ರವಲ್ಲದೆ ದೂರದ ಬೆಂಗಳೂರು, ಮೈಸೂರು, ಕೋಲಾರ, ಕೊಡಗು ಹಾಗೂ ಹಾಸನ, ಹೊರರಾಜ್ಯ ಹಾಗೂ ಹೊರರಾಷ್ಟ್ರ ಗಳಿಂದಲೂ ಕೂಡ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿರುವುದು ಅತೀವ ಹೆಮ್ಮೆ ತಂದಿದೆ. ಸುಳ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಅಮರಜ್ಯೋತಿ ಪಿಯು ಕಾಲೇಜು ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ ಎಂದರು. ಉಪನ್ಯಾಸಕಿ ಶ್ರೀಮತಿ ಕವಿತಾ ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ಬೀನ ಬಿ ಎನ್ ವಂದಿಸಿದರು. ಶ್ರೀಮತಿ ಮಲ್ಲಿಕಾ ಎಮ್ ಎಲ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.