ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದಲ್ಲಿ ಜೂ. 11 ರ೦ದು KodNest ಕ೦ಪೆನಿಯವರಿ೦ದ ಕ್ಯಾಂಪಸ್ ಸೆಲೆಕ್ಷನ್ ಪ್ರಕ್ರಿಯೆ ನಡೆಯಿತು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊ೦ಡರು.
ಈ ಸ೦ದರ್ಭದಲ್ಲಿ KodNest ಕ೦ಪನಿಯ Asst. Manager –Learning & Development ಪಿ. ಕಿರಣ್ ಕುಮಾರ್ ಮತ್ತು Technical Trainer ಸಂದೇಶ್ ಜಿ.ಐ. ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಂಪೆನಿಯ Preplacement talk ಸಂದರ್ಭದಲ್ಲಿ ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ, ಪ್ರಾ೦ಶುಪಾಲ ಡಾ. ಸುರೇಶ ವಿ., ಉಪಪ್ರಾ೦ಶುಪಾಲ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕುಸುಮಾಧರ ಕೆ. ಮತ್ತು ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಉಪಸ್ಥಿತರಿದ್ದರು.