Breaking News

ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಗೆ ದ.ಕ. ಜಿಲ್ಲಾಧಿಕಾರಿ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಶಿಕ್ಷಣದಲ್ಲಿ ಜೀವನ ಮೌಲ್ಯಗಳನ್ನು ರೂಡಿಸಿಕೊಳ್ಳಿ : ಡಾ. ರಾಜೇಂದ್ರ ಕೆ. ವಿ

 

“ಸ್ನೇಹ ಶಿಕ್ಷಣ ಸಂಸ್ಥೆಯ ಸ್ವಚ್ಛ ಸುಂದರ ಹಸಿರು ಪರಿಸರದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು. ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅಗತ್ಯ. ದುರ್ಬಲರಿಗೆ, ಸ್ತ್ರೀಯರಿಗೆ, ವೃದ್ಧರಿಗೆ ಗೌರವ ನೀಡುವ ಉತ್ತಮ ನಾಗರಿಕರಾಗಿ ನೀವೆಲ್ಲರೂ ರೂಪುಗೊಳ್ಳಬೇಕು. ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ. ಈ ಶಾಲೆಯ ಸಮೃದ್ಧ ಪರಿಸರದಲ್ಲಿ ವಿಜ್ಞಾನದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ. ಇಲ್ಲಿ ಸಾಕಷ್ಟು ಮಂದಿ ಶಿಕ್ಷಕಿಯರಿರುವುದು ಶಿಕ್ಷಣ ಗುಣಾತ್ಮಕ ಶಿಕ್ಷಣ ಸಿಗುತ್ತಿರುವುದರ ಸೂಚನೆಯಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿರುವ ಡಾ. ರಾಜೇಂದ್ರ ಕೆ. ವಿ ಅವರು ಹೇಳಿದರು. ಅವರು ಜೂ.14 ರಂದು ರಂದು ಸ್ನೇಹ ಶಿಕ್ಷಣ ಸಂಸ್ಥೆಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಸೂರ್ಯಾಲಯ, ಭಾರತದರ್ಶನ, ಬಯಲುರಂಗ ಮಂದಿರ, ಬಯಲು ವಿಜ್ಞಾನ ಉದ್ಯಾನ ಮುಂತಾದ ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ ಇವರು ಶಾಲಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ, ಹಿರಿಯ ವಿದ್ಯಾರ್ಥಿ ಅಕ್ಷರ ಸಿ ದಾಮ್ಲೆ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.