ನಾಲ್ಕೂರು ಗ್ರಾಮದ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದ್ದಿ ಜನಾಂದೋಲನದ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮವು ಜೂ.15ರಂದು ಜರುಗಿತು.
ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪಾರೆಪ್ಪಾಡಿ ಅವರು ವಿದ್ಯಾರ್ಥಿಗಳಿಗೆ ಲಂಚ ಭ್ರಷ್ಟಾಚಾರ ವಿರೋಧಿ ಘೋಷಣೆ ಮತ್ತು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಹಶಿಕ್ಷಕರುಗಳಾದ ಕುಶಾಲಪ್ಪ ತುಂಬತ್ತಾಜೆ, ಸುಧಾರಾಣಿ, ಮೋಕ್ಷಾ, ಸುದ್ದಿ ಬಿಡುಗಡೆ ಪತ್ರಿಕೆಯ ರಮೇಶ್ ನಿರಬಿದಿರೆ, ಶಿವರಾಮ ಕಜೆಮೂಲೆ, ನವೀನ್ ಮಚಾದೋ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.