Breaking News

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಯೋಗ ಆಹಾರ ಆರೋಗ್ಯ ಬಗ್ಗೆ ಉಪನ್ಯಾಸ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಆರೋಗ್ಯ ಭಾರತಿ ಕರ್ನಾಟಕ ದಕ್ಷಿಣ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಯೋಗ ಆಹಾರ ಆರೋಗ್ಯ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ವಿದ್ಯಾಲಯದಲ್ಲಿ ಜೂ.15 ರಂದು ನಡೆಯಿತು.

ಈ ಕಾರ್ಯಕ್ರಮವನ್ನು ಸಿಟಿ ಆಸ್ಪತ್ರೆ ಪುತ್ತೂರು ಇದರ ಡಾ. ಚೇತನ ಗಣೇಶ್ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಯೋಗಾಸನ ಮತ್ತು ಪ್ರಾಣಾಯಮ ವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಜೀವನವನ್ನು ಸಾಗಿಸಬಹುದು, ಶಿಸ್ತುಬದ್ಧವಾಗಿ ಸಾಮರ್ಥ್ಯಕ್ಕೆ ಅನುಗುಣವಾಗಿ ಉಸಿರಿನೊಂದಿಗೆ ಮಾಡುವ ಯೋಗವು ಬಹಳ ಪರಿಣಾಮಕಾರಿಯಾಗಿರುತ್ತದೆ. ಆಹಾರ ನಿದ್ರೆ ಹಾಗೂ ವ್ಯಾಯಾಮಗಳು ಪೂರಕವಾಗಿ ಕೆಲಸ ಮಾಡಬಲ್ಲದು ಎಂದು ಹೇಳಿದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮೊವ್ವಾರು ಆರೋಗ್ಯ ಭಾರತೀಯ ನಿರ್ದೇಶಕರು ಪುತ್ತೂರು ವಿಭಾಗ ಗಣೇಶ್ , ಆರೋಗ್ಯ ಭಾರತೀಯ ಪುತ್ತೂರು ವಿಭಾಗ ಸಂಯೋಜಕ ಶರತ್ ಭಾಗವತ್, ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಆರನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕ ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.