ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷಾ ಫೈಯರ್ ಎಪಿ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ಕಾಯರ್ತೋಡಿಯ ಶ್ರೀ ಮಹಾವಿಷ್ಣು ಸಭಾಭವನದಲ್ಲಿ ಇಂದು ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎನ್ ಎ ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಉಷಾ ಫೈರ್ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಜಗದೀಶ್ ಅಡಪ ತರಬೇತಿಯ ಪ್ರಾಯೋಜಕರಾಗಿದ್ದರು. ಸುಳ್ಯ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.