Breaking News

ಪಂಜ:ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ನಾಳೆ (ಜೂ.19 ರಂದು) ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಪುನಃ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಜೂ.16 ರಿಂದ ಜೂ.19 ರ ತನಕ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ
ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿರುವುದು.

ಜೂ.19ರಂದು ಬೆಳಿಗ್ಗೆ ಗಂಟೆ 6ರಿಂದ ಮಹಾಗಣಪತಿ ಹೋಮ,ನಾಂದೀಪುಣ್ಯಾಹ, ಗಂಟೆ 7.05ರಿಂದ 8ರ ತನಕ ನಡೆಯುವ ಮಿಥುನ ಲಗ್ನ ಶುಭ
ಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ.
ಜೂ 16ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಬಿಂಬ ಪರಿಗ್ರಹ ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಜೂ. 17.ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶ ಪೂಜೆ, ಬಿಂಬ ಶುದ್ಧಿ ಕಲಶಾಭಿಷೇಕ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ ಗಂಟೆ ಮಹಾಪೂಜೆ ,ಪ್ರಸಾದ ವಿತರಣೆ, ಸಂಜೆ ನೂತನ ಬಿಂಬ ಜಲಾಧಿವಾಸ, ಕುಂಡಶುದ್ಧಿ, ದುರ್ಗಾಪೂಜೆ, ರಾತ್ರಿ,ಮಹಾಪೂಜೆ, ಪ್ರಸಾದ ವಿತರಣೆ ಜರುಗಿತು.
ಜೂ.18.ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಸಂಹಾರ ತತ್ತ್ವ ಹೋಮ, ತತ್ತ್ವ ಕಲಶ ಪೂಜೆ, ಕುಂಭೇಶಕರ್ಕರೀ ಪೂಜೆ, ಶಯ್ಯಾ ಪೂಜೆ, ಪ್ರಾರ್ಥನೆ, ತತ್ತ್ವಕಲಶಾಭಿಷೇಕ, ಧ್ಯಾನಸಂಕೋಚಕ್ರಿಯೆ, ಜೀವಕಲಶಪೂಜೆ, ಜೀವೋದ್ವಾಸನೆ, ಜೀವಕಲಶ, ಶಯ್ಯಾರೋಪಣ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಸಂಜೆ ಬ್ರಹ್ಮಕಲಶ ಪೂಜೆ, ಪರಿ ಕಲಶಪೂಜೆ, ಕಲಶಾಧಿವಾಸ, ಧ್ಯಾನಧಿವಾಸ, ರಾತ್ರಿ ಮಹಾಪೂಜೆ,ಪ್ರಸಾದ ವಿತರಣೆ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು, ವ್ಯವಸ್ಥಾಪನಾ ಸಮಿತಿಯ ಸದಸ್ಯರು , ಸಲಹಾ ಸಮಿತಿಯವರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು. ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ಜರುಗಿತು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.