ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಮುಖ್ಯ ಶಿಕ್ಷಕಿಯಾಗಿ ಬಡ್ತಿಗೊಂಡು ಜಾಲ್ಸೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ವಸಂತಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕ ಇಲ್ಲಿಗೆ ಮುಖ್ಯ ಶಿಕ್ಷಕಿಯಾಗಿ ವರ್ಗಾವಣೆ ಗೊಂಡ ಹೇಮಲತಾ ಎಸ್ ರವರಿಗೆ ಬೀಳ್ಕೊಡುಗೆ ಸಮಾರಂಭ ಜೂ. 20 ರಂದು ಶಾಂತಿನಗರ ಶಾಲೆಯಲ್ಲಿ ಜರುಗಿತು.
ಬೀಳ್ಕೊಡುಗೆ ಸಮಾರಂಭವನ್ನು ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದ , ಶಾಲಾ ಎಸ್ ಡಿ ಎಮ್ ಸಿ ಹಾಗೂ ದೀಪಾಂಜಲಿ ಮಹಿಳಾ ಮಂಡಳಿ ಶಾಂತಿನಗರ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ನಝೀರ್ ಶಾಂತಿನಗರ ವಹಿಸಿದ್ದರು. ಶಾಲಾ ಮುಖ್ಯಶಿಕ್ಷಕರು , ಅಧ್ಯಾಪಕ ವೃಂದ ಹಾಗೂ ದೀಪಾಂಜಲಿ ಮಹಿಳಾ ಮಂಡಳಿ ಅಧ್ಯಕ್ಷರು ಹಾಗೂ ಅಂಗನವಾಡಿ ಶಿಕ್ಷಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಹಾಗೂ ಶಾಲಾ ಎಸ್ ಡಿ ಎಮ್ ಸಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.