ರಂಗ ಮಯೂರಿ ಕಲಾ ಶಾಲೆ ಸುಳ್ಯ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಸುದ್ದಿ ಸಮೂಹ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸುಳ್ಯ
ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ದಿನ ಜೂನ್ 21 ರಂದು ಸುಳ್ಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನಡೆಯಿತು.
ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ರವರು ದೀಪ ಬೆಳಗಿಸುವ ಮೂಲಕ ಯೋಗ ದಿನಕ್ಕೆ ಚಾಲನೆ ನೀಡಿದರು.
ಸುಳ್ಯ ಆರಕ್ಷಕ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸಹಾಯಕ ಸರ್ಕಾರಿ ಅಭಿಯೋಜಕ ಜನಾರ್ದನ ಬಿ., ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ. ಗೌರವ ಉಪಸ್ಥಿತಿ ಇದ್ದರು.
ಯೋಗ ಶಿಕ್ಷಕಿ ಶ್ರೀಮತಿ ಸುನಂದಾ ಶೆಟ್ಟಿ ಹಾಗೂ ಅವರ ಪುತ್ರಿ ವೈಷ್ಣವಿ ಶೆಟ್ಟಿಯವರು ಯೋಗ ಮಾರ್ಗದರ್ಶನ ನೀಡಿದರು.
ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.
ರಂಗ ಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲು ವಂದಿಸಿದರು.