ಇಡ್ಯಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ವಹಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದ ಮಹತ್ವದ ಬಗ್ಗೆ ಹೇಳಿದರು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಎಸ್.ಡಿ. ಎಂ.ಸಿ ಉಪಾಧ್ಯಕ್ಷೆ ವಿದ್ಯಾಶ್ರೀ, ಆರೋಗ್ಯ ಕಾರ್ಯಕರ್ತೆ ಲಾವಣ್ಯ ಉಪಸ್ಥಿತರಿದ್ದರು.
ನಂತರ ವಿದ್ಯಾರ್ಥಿಗಳಿಂದ ಯೋಗ ನೃತ್ಯ, ಹಾಗೂ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಮಾನಸ ಇವರು ಯೋಗ ಪ್ರಾತ್ಯಕ್ಷಿಕೆ ನಡೆಸಿ, ಶಿಕ್ಷಕಿ ರೇಖಾ ಶೇಟ್ ಕಾರ್ಯಕ್ರಮ ನಿರೂಪಿಸಿ,ನಿರ್ವಹಿಸಿದರು. ಶಿಕ್ಷಕಿಯರಾದ ಕಲಾವತಿ ಮತ್ತು ಮಲ್ಲಿಕಾ ಸಹಕರಿಸಿದರು. ಈ ಸಂದರ್ಭದಲ್ಲಿ ಪೋಷಕರು ಉಪಸ್ಥಿತರಿದ್ದರು.