ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾ ಭವನದಲ್ಲಿ “ ಮಾನವೀಯತೆಗಾಗಿ ಯೋಗ” ಎಂಬ ಧ್ಯೇಯವಾಕ್ಯದಡಿಯಲ್ಲಿ 8 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಗಣಪಯ್ಯ ಭಟ್ ವನಶ್ರೀ, ಪತಂಜಲಿ ಯೋಗ ಸಮಿತಿ ಬೆಳ್ಳಾರೆ ಇವರು ಭಾಗವಹಿಸಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಯೋಗ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪವಿತ್ರಮಜಲು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್, ಆರೋಗ್ಯ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಮತ್ತು ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿ ಯೋಗ ದಿನಾಚರಣೆಯಂದು ಯೋಗ ತರಬೇತಿ ಪಡೆಯುವುದರೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.