ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಆಚರಿಸಲಾಯಿತು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ.ಯವರು, ಗ್ರಾಮ ಪಂಚಾಯತ್ ಸದಸ್ಯರು ಪೋಷಕರ ಜಂಟಿ ಆಶ್ರಯದಲ್ಲಿ ಯೋಗದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಮ ಯೇನೆಕಲ್ಲುರವರು ಯೋಗದ ಮಹತ್ವ, ಯೋಗ ನಡೆದು ಬಂದ ರೀತಿ, ಯೋಗದ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ,ಅದನ್ನು ಎಲ್ಲರೂ ತಮ್ಮ ಪ್ರತಿನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಆರೋಗ್ಯವಂತರಾಗಿರಿ ಎಂದು ಶುಭಹಾರೈಸಿದರು.
ಗ್ರಾ.ಪಂ. ಸದಸ್ಯರಾದ ಮೋಹನ್ ಕೋಟಿಗೌಡನಮನೆ ಮತ್ತು ಶಿವರಾಮ ನೆಕ್ರಾಜೆಯವರು ಶುಭ ಹಾರೈಸಿದರು. ಆರೋಗ್ಯ ಇಲಾಖೆಯ ವತಿಯಿಂದ ಸಿ.ಹೆಚ್.ಒ. ಶ್ರೀಮತಿ ನವ್ಯಾ ಯೋಗ ಪ್ರಾತ್ಯಕ್ಷಿಕೆಯಲ್ಲಿ ತೊಡಗಿಕೊಂಡರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಕಮಲ ಸಿ ಸ್ವಾಗತಿಸಿ, ಸಹ ಶಿಕ್ಷಕಿ ಅಂಬಿಕಾ ಎನ್ ವಂದಿಸಿದರು.