ಗೂನಡ್ಕ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮೈದಾನದಲ್ಲಿ ಮಕ್ಕಳು ಯೋಗ ಮಾಡುವ ಮೂಲಕ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ರುಕ್ಮಯ್ಯ ದಾಸ್ ಯೋಗ ದಿನವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ಯೋಗದ ಮಹತ್ವವನ್ನು ತಿಳಿಸಿದರು.
ಶಾಲಾ ಶಿಕ್ಷಕ ಧನರಾಜ್ ಮತ್ತು ಶಿಕ್ಷಕಿ ಕು. ಡೀನಾರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್, ಸಂಸ್ಥೆಯ ನಿರ್ದೇಶಕರಾದ ಲೀಲಾವತಿ ರುಕ್ಮಯ್ಯ ದಾಸ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.