ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರು ಇವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆಗಾಗಿ ಕರ್ನಾಟಕ ಸರಕಾರ ನೀಡಿದ ಪ್ರತಿಷ್ಟಿತ ಸಹಕಾರಿ ರತ್ನ ಪ್ರಶಸ್ತಿ ದೊರೆತ ಬಗ್ಗೆ ಮತ್ತು ೭೫ನೇ ಹುಟ್ಟು ಹಬ್ಬದ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಎಲ್ಲಾ ಸಿಬ್ಬಂದಿಗಳ ವತಿಯಿಂದ ಸನ್ಮಾನ ಕಾರ್ಯಕ್ರಮ ೦೯ರಂದು ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಸನ್ಮಾನವನ್ನು ಸಂಘದ ಉಪಾಧ್ಯಕ್ಷರಾದ ಎನ್ ಸುಂದರ ರೈ ಸವಣೂರು ನೆರವೆರಿಸಿದರು. ಪಂಜ ಶಾಖೆಯ ವ್ಯವಸ್ಥಾಪಕರಾದ ಪರಮೇಶ್ವರ ಗೌಡ ಇವರು ಅಭಿನಂದನಾ ಭಾಷಣ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿದ್ಯಾರಶ್ಮಿ ಕಾಲೇಜಿನ ಆಡಳಿತಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಮಹೇಶ್ ರೈ,ಯು.ಎಸ್.ಎ, ಎ.ಜೆ. ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಜೇಶ್ ರೈ, ಸವಣೂರು ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ,ಮುಂಡೂರು ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯಪ್ರಕಾಶ್ ರೈ, ಅಮೃತೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ಶ್ರೀಮತಿ ಕುಸುಮಾ ಪಿ ಶೆಟ್ಟಿ, ಸಂಘದ ಮಹಾ ಪ್ರಬಂಧಕರಾದ ವಸಂತ್ ಜಾಲಾಡಿ, ಸಂಘದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.