ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸುಳ್ಯ ತಾಲೂಕಿನಲ್ಲಿ ಇರುವ ವಸತಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ ೧, ೧೧ಎ, ೧೧ಬಿ., ೧೧೧ ಎ, ೧೧೧ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಜನಾಂಗಗಲಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೨-೨೩ ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ.ಜಾತಿ, ಪ.ಪಂಗಡ ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ. ೧ ಲಕ್ಷ. ಇತರೆ ವರ್ಗದವರಿಗೆ ರೂ.೪೪,೫೦೦ ಆದಾಯ ಮಿತಿಯಾಗಿದೆ.
ಅರ್ಜಿ ಸಲ್ಲಿಸುವ ವಿಧಾನ : ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ www.bcwd.Karnataka.gov.in ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ SATS ID ಯನ್ನು ಅರ್ಜಿಯನ್ನು ನಮೂದಿಸಬೇಕು. ಆದಾರ್ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರದ ಸಂಖ್ಯೆ, ವ್ಯಾಸಂಗ ಮಾಡುವ ಕಾಲೇಜು ಇತ್ಯಾದಿ ವಿವರ ಇರಬೇಕು. ಅಜಿ ಸಲ್ಲಿಕೆಗೆ ಜೂ.30ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸುಳ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.