Breaking News

ಜೂ. 26 ರಂದು ಮಡಪ್ಪಾಡಿ-ಸೇವಾಜೆ ರಸ್ತೆ ಮತ್ತು ಸೇವಾಜೆ ಸೇತುವೆ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ-ಮಡಪ್ಪಾಡಿ ರಸ್ತೆ ಮತ್ತು ಸೇವಾಜೆ ಸೇತುವೆ ಜೂ.26 ರಂದು ಉದ್ಘಾಟನೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಸಂಸದ ನಳಿನ್‌ಕುಮಾರ್ ಕಟೀಲ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಮತ್ತಿತರರು ಭಾಗವಹಿಸಲಿದ್ದಾರೆ.
ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಯತ್ನ ಮತ್ತು ಗ್ರಾಮ ವಾಸ್ತವ್ಯದ ಫಲವಾಗಿ ಸರಕಾರ ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿತ್ತು. ಜ.11ರಂದು ಶಂಕುಸ್ಥಾಪನೆ ನೆರವೇರಿ ಕಾಮಗಾರಿ ಆರಂಭಗೊಂಡಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ 2020 ಜನವರಿ 5 ರಂದು ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡಬೇಕು ಎಂಬುದು ಜನರಿಂದ ಕೇಳಿ ಬಂದ ಪ್ರಮುಖ ಬೇಡಿಕೆಯಾಗಿತ್ತು. ಬಳಿಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ಪತ್ರಕರ್ತರ ನಿಯೋಗ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಡಪ್ಪಾಡಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸ್ಪಂದಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು 2 ಕೋಟಿ ಅನುದಾನ ಘೋಷಣೆ ಮಾಡಿದ್ದರು. ಅದರಲ್ಲಿ 1.5 ಕೋಟಿ ಅನುದಾನ ಬಿಡುಗಡೆಯಾಗಿ ಕಾಮಗಾರಿ ಪೂರ್ತಿಯಾಗಿದೆ. ಎಲಿಮಲೆಯಿಂದ ಮಡಪ್ಪಾಡಿಗೆ 9 ಕಿ.ಮಿ.ದೂರವಿದೆ. ಎಲೆಮಲೆ- ಅರಂತೋಡು ಲೋಕೋಯೋಗಿ ರಸ್ತೆಯ ಸೇವಾಜೆಯಿಂದ ಮಡಪ್ಪಾಡಿಗೆ 5 ಕಿ.ಮಿ.ದೂರ ಇದೆ. ಇದರಲ್ಲಿ 1.5 ಕಿ.ಮಿ. ರಸ್ತೆ ಅಭಿವೃದ್ಧಿಯಾಗಿತ್ತು. ಉಳಿದ 3.7 ಕಿ.ಮಿ. ರಸ್ತೆ ಸಂಪೂರ್ಣ ಹಾಳಾಗಿತ್ತು. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ ಈ ಅನುದಾನದಲ್ಲಿ ರಸ್ತೆಯ 150 ಮೀಟರ್ ಕಾಂಕ್ರೀಟೀಕರಣ ಮತ್ತು ಉಳಿದ ಭಾಗ ಡಾಮರೀಕರಣ ನಡೆದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.