ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2022 – 23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ಸಮಾರಂಭವು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಜೂ. 29ರಂದು ನಡೆಯಿತು.
ಪಥಸಂಚಲನದ ಮೂಲಕ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಿದರು. ವೇದಿಕೆಯಲ್ಲಿ ಸುಳ್ಯದ ಸಬ್ ಇನ್ಸ್ಪೆಕ್ಟರ್ ದಿಲೀಪ್ ಜಿ. ಆರ್, ಕೆವಿಜಿ ಐಪಿಎಸ್ ನ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಆಡಳಿತ ಮಂಡಳಿಯ ಸದಸ್ಯರಾಗಿರುವ ಸಂತೋಷ್ ಕುತ್ತಮುಟ್ಟೆ, ದಿನೇಶ್ ಮಡಪ್ಪಾಡಿ, ಬಾಲಕೃಷ್ಣ ಸೇರ್ಕಜೆ, ಪಿ. ಎಸ್ ಗಂಗಾಧರ್, ಪ್ರಾಂಶುಪಾಲರಾದ ಅರುಣ್ ಕುಮಾರ್, ಉಪಪ್ರಾಂಶುಪಾಲರಾದ ಶಿಲ್ಪ ಬಿದ್ದಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪದವಿ ಪದಕ ನೀಡಿ, ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿ ನಾಯಕ ಯಶಸ್, ನಾಯಕಿ ಸೃಜನ ಬಿ.ಎಸ್ ನಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾಪ್ರಸಾದ್ ಕೆ.ವಿ ಮತ್ತು ನಿರ್ದೇಶಕರಾದ ಡಾ.ಜ್ಯೋತಿ ಆರ್ ಪ್ರಸಾದ್ ‘ ಬದುಕಿನಲ್ಲಿ ನಿಶ್ಚಿತ ಗುರಿ, ಸತತ ಅಭ್ಯಾಸ, ಏಕಾಗ್ರತೆ ಇಟ್ಟುಕೊಂಡು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದು’ ವಿದ್ಯಾರ್ಥಿಗಳಿಗೆ ಶುಭ ಸಂದೇಶ ಕಳುಹಿಸಿದ್ದರು. ಹತ್ತನೇ ತರಗತಿಯ ಅಭಿಜ್ಞಾ ಭಟ್ ಸ್ವಾಗತಿಸಿ, ದೃಶ ಪಾನಾತ್ತಿಲ ವಂದಿಸಿದರು.
ರಿಷಬ್ ಮತ್ತು ಪ್ರತಿಜ್ಞಾ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಸನ್ನಕುಮಾರ್ ಕಲ್ಲಾಜೆ, ಅರುಣ್ ಕುರುಂಜಿ, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.