ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ತಾಲೂಕು ಘಟಕದ ವತಿಯಿಂದ 2021- 22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ. 100 ಅಂಕ ಪಡೆದ ಸುಳ್ಯ ತಾಲೂಕಿನ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜು.2 ರಂದು ಅಪರಾಹ್ನ 2ಕ್ಕೆ ಸುಳ್ಯದ ಕನ್ನಡ ಭವನದಲ್ಲಿ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರಿ ರತ್ನ ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕ.ಸಾ.ಪ.ತಾಲೂಕು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಲಿದ್ದಾರೆ.
ಕನ್ನಡ ವಿಷಯದಲ್ಲಿ 100 ಅಂಕ ಪಡೆದ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಗೌರವಾರ್ಪಣೆ ಸ್ವೀಕರಿಸಬೇಕೆಂದು ಕ.ಸಾ.ಪ.ತಾಲೂಕು ಘಟಕದ ಪದಾಧಿಕಾರಿಗಳು ವಿನಂತಿಸಿದ್ದಾರೆ.