Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಿದಾಯಕೂಟ ಸಮಾರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಭವಿಷ್ಯದಲ್ಲಿ ಅಭಿವೃದ್ಧಿಯ ವೇಗದ ಜೊತೆ ಹೊಂದಾಣಿಕೆ ಅಗತ್ಯ : ಎಂ.ಬಿ. ಸದಾಶಿವ

೨೦೨೧-೨೨ನೇ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟವು ಕಾಲೇಜಿನ ಅಡಿಟೋರಿಯಂನಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಜಿಲ್ಲಾ ಗವರ್ನರ್, ಲಯನ್ಸ್ ಇಂಟರ್‌ನ್ಯಾಷನಲ್ ಎಂ.ಬಿ. ಸದಾಶಿವ ಅವರು ಮಾತನಾಡಿ, ಕಳೆದ ೩೬ ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಒಂದು ಅತ್ಯುನತ ಸಂಸ್ಥೆಯಾಗಿ ಬೆಳೆದಿದ್ದು, ಸಂಸ್ಥೆಯ ಕಾರ್ಯದರ್ಶಿಗಳ ದಣಿವರಿಯದ ಶ್ರಮವನ್ನು ಕೊಂಡಾಡಿದರು, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ, ಉದ್ಯೋಗ ನೀಡಿದ್ದಲ್ಲದೆ, ಸ್ಥಾಪಕಾಧ್ಯಕ್ಷರ ನಿಲುವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಮುಂದುವರಿಯುತ್ತಿದೆ. ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಪಂಚಸೂತ್ರಗಳಾದ ಸಕರಾತ್ಮಕ ಚಿಂತನೆ, ಹೊಂದಾಣಿಕೆ, ಆತ್ಮಸ್ಥೈರ್ಯ, ಶಿಸ್ತು ಮತ್ತು ಸಮಯದ ಹೊಂದಾಣಿಕೆ ಅಳವಡಿಸಿಕೊಂಡು ಉತ್ತಮ ಇಂಜಿನಿಯರುಗಳಾಗಬೇಕೆಂದು ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ಮಾತನಾಡಿ, ಸಂಸ್ಥೆಯ ಅತ್ಯುತ್ತಮ ಶಿಕ್ಷಣವನ್ನು ಎಲ್ಲಾ ವರ್ಗದವರಿಗೆ ಕೈಗೆಟಕುವ ಹಾಗೆ ಒದಗಿಸಿಕೊಡುತ್ತಿರುವುದಲ್ಲದೆ, ಮುಂಬರುವ ದಿನಗಳಲ್ಲಿ ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ತಾವು ಉತ್ತಮ ಉದ್ಯೋಗದಲ್ಲಿ ತೊಡಗಿಸಿಕೊಂಡು ಸಂಸ್ಥೆಗೆ ಒಳ್ಳೆಯ ಹೆಸರು ತರಬೇಕೆಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ವಿದಾಯದ ನುಡಿಗಳನ್ನು ಸಂಸ್ಥೆಯ ಪರವಾಗಿ ನೀಡಿದರು. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ., ಕಾಲೇಜಿನ ಆಡಳಿತಾಧಿಕಾರಿ ಶ್ರೀ ನಾಗೇಶ್ ಕೊಚ್ಚಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಫ್ನನ್ ಅಹಮದ್, ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ ಪೂಜಾ ಎಂ. ಎಲ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಿಂದ ಶ್ರೀವರ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಿಂದ ಶ್ವೇತಾ ಎ. ವಿದ್ಯಾರ್ಥಿಗಳ ಪರವಾಗಿ ಅನಿಸಿಕೆಗಳನ್ನು ಹಂಚಿಕೊಂಡರು.
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರುಗಳಾದ ಪ್ರೊ. ಕೃಷ್ಣರಾಜ್ ಪ್ರಾರ್ಥನೆಗೈದು, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಅತಿಥಿಗಳನ್ನು ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ರವರು ವಂದಿಸಿದರು. ಪ್ರೊ. ಶೃತಿ ಪಿ.ಜೆ. ಮತ್ತು ಪ್ರೊ. ಅಶ್ವಿಜ ಕೆ.ಸಿ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಲೋಕೇಶ್ ಪಿ.ಸಿ. ಮತ್ತು ಡಾ. ಪ್ರಜ್ಞಾ ಎಂ.ಆರ್. ಕಾರ್ಯಕ್ರಮ ಆಯೋಜಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.