ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಭಾವನಾ ಸುಗಮ ಸಂಗೀತ ಬಳಗ ಸುಳ್ಯ ,ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ಸರಣಿಯ 5ನೇ ಕಾರ್ಯಕ್ರಮ ಶಾರದಾ ಪದವಿ ಪೂರ್ವ ವಿದ್ಯಾಲಯ ಸುಳ್ಯದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲೆ,ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಶ್ರೀಮತಿ ರೇವತಿ ನಂದನ್ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ “ದೇಶಭಕ್ತಿ ಗೀತೆಗಳು ನಮ್ಮ ಮನಗಳನ್ನು ಜಾಗೃತಗೊಳಿಸುತ್ತವೆ.ಪ್ರತಿ ವ್ಯಕ್ತಿಯು ತನ್ನ ದೇಶ-ಸಂಸ್ಕೃತಿಯ ಬಗ್ಗೆ ಅಭಿಮಾನ ಹೊಂದಿರಬೇಕು’ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಭಾವನಾ ಸುಗಮ ಸಂಗೀತ ಬಳಗದ ಸ್ಥಾಪಕ,ಗಾಯಕ ಕೆ.ಆರ್.ಗೋಪಾಲಕೃಷ್ಣ, ಶಾರದಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ,ಪದವಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜ್ಯೋತ್ನ್ಸಾ ,ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.ಪರಿಷತ್ತಿನ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಧನ್ಯವಾದ ಸಮರ್ಪಣೆಗೈದರು.ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಕೆ.ಆರ್.ಗೋಪಾಲಕೃಷ್ಣ,ಕುಮಾರಿ ಶುಭಧಾ .ಆರ್.ಪ್ರಕಾಶ್ ಮತ್ತು ಕುಮಾರಿ ಲಿಪಿ ಶ್ರೀ ಯವರು ದೇಶಭಕ್ತಿ ಗೀತೆಗಳನ್ನು ಪ್ರಸ್ತುತ ಪಡಿಸಿದರು.