ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಗಸ್ಟ್ 5ರಂದು ಶ್ರೀ ಮಹಿಷಮರ್ದಿನಿ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ, ಶ್ರೀ ಮಹಿಷಮರ್ದಿನಿ ಸೇವಾ ಸಮಿತಿ ಹಾಗೂ ಶ್ರೀ ಮಹಿಷಮರ್ದಿನಿ ಮಹಿಳಾ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡೆಯಲಿರುವುದು.
ಅದೇ ದಿನ ಬೆಳಿಗ್ಗೆ ಪ್ರಾರ್ಥನೆ ಪೂಜೆ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಧನಸಹಾಯ ನೀಡಿ, ಪೂಜಾ ರಶೀದಿ ಪಡೆದುಕೊಳ್ಳಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.