ಭಾರತದ 15ನೇ ರಾಷ್ಟ್ರಪತಿಗಳಾಗಿ ನೂತನವಾಗಿ ಆಯ್ಕೆಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸಂಸದ ಹಾಗೂ ಬಿಜೆಪಿ
ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಜು.22ರಂದು ದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಬಳಿಕ ಮಾತನಾಡಿದ ಅವರು ಕಟೀಲು ದೇವಿ ಶ್ರೀ ದುರ್ಗಾಪರಮೇಶ್ವರಿ ಕೃಪೆಯಿಂದ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ರಾಷ್ಟ್ರಪತಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ದ್ರೌಪದಿ ಮುರ್ಮು ಅವರು ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಹೇಳಿದರು.