Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜು.22 ರಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು. ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಆದಿಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದು ಮೃತ್ತಿಕಾ ಪ್ರಸಾದ ಪಡೆದರು.ನಂತರ ದೇವಳದಲ್ಲಿ ಉಪಹಾರ ಸ್ವೀಕರಿಸಿದರು.
ನಂತರ ದೇವಳದ ಆಡಳಿತ ಕಚೇರಿಗೆ ಆಗಮಿಸಿದ ಸಚಿವರನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ.ವಿ.ಭಟ್, ಮಾಜಿ ಸದಸ್ಯ ಕಿಶೋರ್ ಶಿರಾಡಿ, ಶಿಷ್ಠಾಚಾರ ಅಧಿಕಾರಿ ಜಯರಾಮ ರಾವ್, ಶಿಷ್ಠಾಚಾರ ವಿಭಾಗದ ಹರೀಶ್ ಉಪಸ್ಥಿತರಿದ್ದರು.
ಜು.22 ರ ರಾತ್ರಿ ಶ್ರೀ ಕ್ಷೇತ್ರಕ್ಕೆ ಸಚಿವರು ಆಗಮಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.