ಜಾಲ್ಸೂರು ಗ್ರಾಮದ ಬೊಳುಬೈಲಿನ ಕುಂಬರ್ಚೋಡು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನಕ್ಕೆ ತೆರಳುವ ರಸ್ತೆಯು ಬಾರೀ ಮಳೆಯಿಂದಾಗಿ ಕೆಸರುಮಯವಾಗಿದ್ದು, ರಸ್ತೆ ದುರಸ್ತಿ ಪಡಿಸಿಕೊಡುವಂತೆ ಊರವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಸ್ಥಳೀಯರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದ್ದು, ಗ್ರಾ.ಪಂ. ನವರು ಬಂದು ರಸ್ತೆ ಪರಿಶೀಲನೆ ನಡೆಸಿ ಹೋಗಿದ್ದು, ದುರಸ್ತಿ ಕಾರ್ಯ ಇನ್ನೂ ನಡೆದಿಲ್ಲ ಎಂದು ತಿಳಿದುಬಂದಿದೆ.