Breaking News

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದ ಸಂಘದ ನೂತನ ಸಭಾಭವನ ಉದ್ಘಾಟನೆ; ಸಚಿವ ಎಸ್.ಅಂಗಾರರಿಂದ ನೂತನ ಸಭಾಭವನ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಉಪಸ್ಥಿತಿ

 

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಭಾಭವನವನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿದರು. ಸಭಾ ಕಾರ್ಯಕ್ರಮ ವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ|| ಎ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕ ಶಶಿಕುಮಾರ್ ಬಾಲ್ಯೋಟು ಸಭಾಂಗಣದ ನಾಮಫಲಕ ಅನಾವರಣಗೊಳಿಸಿದರು.


ವೇದಿಕೆಯಲ್ಲಿ ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ಬಿ. ನಾಯಕ್, ಸಹಕಾರ ಸಂಘಗಳ ಪುತ್ತೂರು ಉಪ ವಿಭಾಗದ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಕೆ., ತಾಲೂಕು ಸಹಕಾರ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ಸ್ಥಳ ದಾನಿಗಳಾದ ಸೋಮಶೇಖರ ಕೇಪಳಕಜೆ, ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಉಮೇಶ್ ಪ್ರಭು ಸ್ವಾಗತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.