ರಾಜ್ಯ ಒಕ್ಕಲಿಗರ ಸಂಘ (ರಿ )ಬೆಂಗಳೂರು ರವರ ಸಹಯೋಗದಲ್ಲಿ ಗೌಡರ ಯುವ ಸೇವಾ ಸಂಘ(ರಿ )ಸುಳ್ಯ ಇದರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ಪ್ರಥಮ ಸ್ಥಾನ ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.