ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಭಿರಾಮ್ ಎಂಟನೇ ತರಗತಿ ಪ್ರಥಮ ಸ್ಥಾನ, ಬಿಂದು ಒಂಬತ್ತನೇ ತರಗತಿ ಚತುರ್ಥ ಸ್ಥಾನದೊಂದಿಗೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜಾ,ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಚೇತನ , ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ , ಪುಷ್ಪವೇಣಿ ಶುಭ ಕೋರಿದರು.