ಬಾಳುಗೋಡು ಅಂಗನವಾಡಿ ಕೇಂದ್ರದಲ್ಲಿ ಅಮೃತ ಗೊಂಚಲು ಸಭೆಯನ್ನು ಜು.21 ರಂದು ನಡೆಸಲಾಯಿತು.
ಅಧ್ಯಕ್ಷತೆಯನ್ನು ಶ್ರೀಮತಿ ಹಷಿ೯ಣಿಯವರು ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರಾದ ಶ್ರೀಮತಿ ರಶ್ಮಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಕೊಲ್ಲಮೊಗ್ರ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಜಯರವರು ಸ್ತ್ರೀ ಶಕ್ತಿ ಗುಂಪುಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಹಾಗೂ ದಾಖಲಾತಿ ನಿವ೯ಹಣೆ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಂಪ್ಯೂಟರ್ ಆಫ್ ರೇಟರ್ ರಾದ ಶ್ರೀಮತಿ ಮಲ್ಲಿಕಾ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಶ್ರೀಮತಿ ಮೋಹಿನಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು . ಶ್ರೀಮತಿ ಶಾರದಾರವರು ಪ್ರಾರ್ಥನೆ ಮಾಡಿದರು. ಶ್ರೀಮತಿ ಲಲಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ನಿರ್ಮಲ ಸ್ವಾಗತಿಸಿ, ಶ್ರೀಮತಿ ಜಯಲಕ್ಷ್ಮಿರವರು ವಂದಿಸಿದರು.