ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನಾ ಇಲಾಖೆ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ತೇಜಸ್ವಿ ಕಡಪಳ ರವರು ನಿರ್ಮಿಸಿದ್ದ ‘ಖುಷಿಯೋಂಕಾ ಆಶಿಯಾನ’ ಎಂಬ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಜು. 26ರಂದು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕ.ಸಾ.ಪ.ದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.
ಚೊಕ್ಕಾಡಿ ಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಭಾವನಾ ಸುಗಮ ಸಂಗೀತ ಬಳಗದ ಅಧ್ಯಕ್ಷ ಕೆ.ಆರ್.ಗೋಪಾಲಕೃಷ್ಣ, ಆಡಳಿತ ಮಂಡಳಿ ನಿರ್ದೇಶಕರಾದ ಆನಂದ ಚಿಲ್ಪಾರು, ವೆಂಕಟ್ರಮಣ ಇಟ್ಟಿಗುಂಡಿ, ಕಾರ್ಯದರ್ಶಿ ತೇಜಸ್ವಿ ಕಡಪಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಪ್ರಸಾದ್ ಮಾಡಬಾಕಿಲು, ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಜಯಶ್ರೀ ಎಂ ಕಾರ್ಯಕ್ರಮ ನಿರೂಪಿಸಿದರು.