Breaking News

ಬೆಳ್ಳಾರೆ : ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ದುರ್ಮರಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬವರಿಗೆ ದುಷ್ಕರ್ಮಿಗಳು ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಇವರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತಿಯಿಂದ ಕಡಿದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು (ಜು.26ರಂದು) ರಾತ್ರಿ ಈ ಘಟನೆ ನಡೆದಿದೆ.ಪ್ರವೀಣ್‌ರವರು ತನ್ನ ಅಂಗಡಿಯಲ್ಲಿ ಕುಳಿತುಕೊಂಡಿದ್ದ ವೇಳೆ ಕೆಎಲ್ ನಂಬರಿನ ಬೈಕ್‌ನಲ್ಲಿ ಬಂದಿದ್ದ ಈರ್ವರು ದುಷ್ಕರ್ಮಿಗಳು ಅಲ್ಲಿಗೆ ಬಂದಿದ್ದರು.ಇದನ್ನು ಗಮನಿಸಿದ ಪ್ರವೀಣ್‌ರವರು ತಪ್ಪಿಸಿಕೊಳ್ಳಲೆಂದು ಪಕ್ಕದ ಅಂಗಡಿಗೆ ಹೋಗುತ್ತಿದ್ದ ವೇಳೆಯೇ ಹಿಂದಿನಿಂದ ಬಂದು ಅವರ ತಲೆಗೆ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.ಇದರಿಂದಾಗಿ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ್‌ರವರನ್ನು ಕೂಡಲೇ ಅಲ್ಲಿಂದ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆಂದು ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಘಟನೆ ಯಾಕಾಗಿ ನಡೆಯಿತು ಎಂಬುದು ನಿಗೂಢವಾಗಿದೆಯಾದರೂ ಕೆಲ ದಿನಗಳ ಹಿಂದೆ ಕಳೆಂಜ ವಿಷ್ಣುನಗರದಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಸುದ್ದಿ ಹರಡಿದೆ.ಘಟನೆಯಿಂದಾಗಿ ಬೆಳ್ಳಾರೆಯಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಈಗಾಗಲೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪುತ್ತೂರಿನಲ್ಲಿ ಅಂಗಡಿ ಬಂದ್ ಮಾಡಿಸಿದ ಪೊಲೀಸರು: ಈ ಘಟನೆ ಬೆನ್ನಲ್ಲೇ ಪೊಲೀಸರು ಪುತ್ತೂರು ಪೇಟೆಯಲ್ಲಿನ ಅಂಗಡಿ, ಹೊಟೇಲ್ ಮಳಿಗೆಗಳನ್ನು ರಾತ್ರಿ ವೇಳೆ ಅವಧಿಗೆ ಮೊದಲೇ ಬಂದ್ ಮಾಡಿಸಿದ ಘಟನೆ ನಡೆದಿದೆ.ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.