ಕನಕಮಜಲಿನಲ್ಲಿ ಅಂಗಡಿಗಳು ಬಂದ್ ರಸ್ತೆಗಿಳಿಯದ ಅಟೋರಿಕ್ಷಾ
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಹಿಂದೂ ಯುವಕ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದುದನ್ನು ಖಂಡಿಸಿ, ಹಿಂದೂಪರ ಸಂಘಟನೆಗಳು ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದ್ದು, ಕನಕಮಜಲಿನಲ್ಲಿ ವರ್ತಕರು ತಮ್ಮ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಅಟೋ ರಿಕ್ಷಾಗಳು ರಸ್ತೆಗೆ ಇಳಿಯದೇ ಸ್ವಯಂಪ್ರೇರಿತರಾಗಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಸ್ಥಳೀಯ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೂ ರಜೆ ನೀಡಿರುವುದಾಗಿ ತಿಳಿದುಬಂದಿದೆ.