Breaking News

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪಾರ್ಥೀವ ಶರೀರದ ಅಂತ್ಯಸಂಸ್ಕಾರ : ಸಹಸ್ರಾರು ಕಾರ್ಯಕರ್ತರು ಭಾಗಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಪ್ರವೀಣ್ ಪೂಜಾರಿ ಅವರ ಪಾರ್ಥೀವ ಶರೀರದ ಅಂತಿಮ ಸಂಸಾರ ಇಂದು ಅಪರಾಹ್ನ ನೆಟ್ಟಾರಿನ ಅವರ ಮನೆಯಲ್ಲಿ ನೆರವೇರಿತು.

ಇದಕ್ಕೂ ಮುನ್ನ ಪಾರ್ಥೀವ ಶರೀರದ ಅಂತಿಮ ಯಾತ್ರೆ ನಡೆಯಿತು. ಸಾವಿರಾರು ಮಂದಿ ಇದರಲ್ಲಿ ಭಾಗಿಯಾಗಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮೃತದೇಹವನ್ನು ಮನೆಯವರಿಗೆ ಬಿಟ್ಟುಕೊಡಲಾಯಿತು.
ಪುತ್ತೂರಿನಿಂದ ದರ್ಬೆ, ಸವಣೂರು, ಕಾಣಿಯೂರು, ನಿಂತಿಕಲ್ಲು ಮಾರ್ಗವಾಗಿ ಪಾರ್ಥೀವ ಶರೀರವನ್ನು ಹೊತ್ತ ಆಂಬ್ಯುಲೆನ್ಸ್ ಬಂತು. ಹಲವಾರು ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಗಳು ಮೆರವಣಿಗೆಯಲ್ಲಿತ್ತು.

ನಿಂತಿಕಲ್ಲಿನಲ್ಲಿ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಅಲ್ಲಿ ಸ್ವಲ್ಪ ಹೊತ್ತು ಆಂಬ್ಯುಲೆನ್ಸ್ ನಿಲ್ಲಿಸಿದ ಬಳಿಕ ಬೃಹತ್ ವಾಹನ ಮೆರವಣಿಗೆಯಲ್ಲಿ ಬೆಳ್ಳಾರೆಗೆ ಕರೆತರಲಾಯಿತು. ಮಾರ್ಗದ ಇಕ್ಕೆಲಗಳಲ್ಲೂ ಸಾವಿರಾರು ಮಂದಿ ಈ ದೃಶ್ಯವನ್ನು ನೋಡುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ಜನದಟ್ಟಣೆ ಮತ್ತು ವಾಹನ ದಟ್ಟಣೆ ಉಂಟಾಯಿತು.

ಬೆಳ್ಳಾರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಮೃತದೇಹವನ್ನು ಇರಿಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ ಜನದಟ್ಟಣೆಯಿಂದಾಗಿ ಪಾರ್ಥೀವ ಶರೀರವನ್ನು ಇಳಿಸುವುದೇ ದೊಡ್ಡ ಸಾಹಸದ ಕೆಲಸವಾಗಿತ್ತು. ಅಲ್ಲಿ ಮೃತದೇಹ ಆಗಮಿಸುವ ವೇಳೆಗಾಗಲೇ ಸಚಿವರಾದ ಎಸ್.ಅಂಗಾರ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದರು. ಪಾರ್ಥೀವ ಶರೀರಕ್ಕೆ ಪುಷ್ಪಾಂಜಲಿ ಅರ್ಪಿಸಲಾಯಿತು. ರಾಮ ನಾಮ ಜಪಿಸಲಾಯಿತು.
ಸ್ವಲ್ಪ ಹೊತ್ತಿನಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು ಮೊದಲಾದವರು ಆಗಮಿಸಿದರು. ಆಗ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಜನಪ್ರತಿನಿಧಿಗಳಿಗೆ, ಪಕ್ಷಕ್ಕೆ ಧಿಕ್ಕಾರ ಘೋಷಣೆಯೂ ಮೊಳಗಿತು. ಈ ಸನ್ನಿವೇಶದ ಕಾರಣದಿಂದ ಬಹಳ ಹೊತ್ತು ಪಾರ್ಥೀವ ಶರೀರವನ್ನು ಅಲ್ಲಿ ಇರಿಸದೆ ನೆಟ್ಟಾರಿನ ಮನೆಗೆ ಕೊಂಡೊಯ್ಯಲಾಯಿತು.
ಮನೆಯಲ್ಲಿ ಅಂತಿಮ ವಿಧಿವಿಧಾನದ ಬಳಿಕ ಅಂತ್ಯ ಸಂಸ್ಕಾರ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಪ್ರವೀಣ್ ಅವರ ಸ್ನೇಹಿತರು, ಬಂಧುಗಳು, ಅಭಿಮಾನಿಗಳು, ಬಿಜೆಪಿ ಮುಖಂಡರು, ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.