ಬೆಳ್ಳಾರೆಯಲ್ಲಿ ನಡೆದ ಕೊಲೆ ಘಟನೆಗೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನಲ್ಲಿ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಜು.28 ನಡೆಯಬೇಕಿದ್ದ ಕನಕಮಜಲು ಗ್ರಾಮ ಪಂಚಾಯತಿಯ ನರೇಗಾ ಯೋಜನೆಯ ಹಾಗೂ 14 ಮತ್ತು 15 ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯನ್ನು ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯತಿ ವತಿಯಿಂದ ತಿಳಿಸಲಾಗಿದೆ.