ಮುಖ್ಯಮಂತ್ರಿ ಹಾಗೂ ಗೃಹಸಚಿವರಲ್ಲಿ ಈ ಕುರಿತು ಮಾತುಕತೆ ನಡೆಸಿದ್ದೇನೆ: ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್
ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ಪೂಜಾರಿ ಹಂತಕರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಜೊತೆ ಮಾತುಕತೆ ನಡೆಸಿದ್ದು, ತೀವ್ರವಾದ ತನಿಖೆಯ ಮೂಲಕ ಅತ್ಯಂತ ಶೀಘ್ರದಲ್ಲೇ ಹಂತಕರನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ರೀತಿಯ ಘಟನೆಗಳು ನಡೆದಿರಲಿಲ್ಲ. ಆದರೆ ಈಗ ಮತ್ತೆ ಇದು ಪ್ರಾರಂಭಗೊಂಡಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಮುಕ್ತ ಅವಕಾಶವನ್ನು ಸರಕಾರ ನೀಡಲಿದೆ ಎಂದು ಸಚಿವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.