ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಸರ್ಕಾರದ ಹೊಸ ಆದೇಶದಂತೆ ವಿದ್ಯಾರ್ಥಿಗಳಿಗೆ ಪೌಷ್ಟಿಕತೆಗೆ ಮೊಟ್ಟೆ, ಬಾಳೆಹಣ್ಣು ಮುಂತಾದವುಗಳನ್ನು ಜು.26 ರಂದು ವಿತರಿಸಲಾಯಿತು.
ವಾರದಲ್ಲಿ ಎರಡು ಬಾರಿ ವಿದ್ಯಾರ್ಥಿಗಳಿಗೆ ಇದನ್ನು ನೀಡಲು ಸರ್ಕಾರ ಆದೇಶಿಸಿದ್ದು, ಸರ್ಕಾರದ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ವನ್ನು ಸುಳ್ಯ ತಾಲ್ಲೂಕು ಶಿಕ್ಷಣಾಧಿಕಾರಿ ಮಹಾದೇವ್ ಉದ್ಘಾಟಿಸಿದರು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಕೆ.ಪಿ.ಎಸ್ ಕಾರ್ಯಧ್ಯಕ್ಷ ಪ್ರವೀಣ್ ನಾಯಕ್, ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ಪ್ರವೀತಾ, ಉಪ ಪ್ರಾಂಶುಪಾಲ ಅರುಣ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ, ಶಿಕ್ಷಕರು, ಅಕ್ಷರ ದಾಸೋಹ ಸಿಬಂದಿ ಗಳು, ವಿದ್ಯಾರ್ಥಿಗಳು ಹಾಜರಿದ್ದರು.