ಜಯನಗರ ಸ. ಉ ಹಿ ಪ್ರಾ ಶಾಲೆಯಲ್ಲಿ ಸರ್ಕಾರದ ಹೊಸ ಆದೇಶದಂತೆ ವಿದ್ಯಾರ್ಥಿಗಳಿಗೆ ಪೌಷ್ಟಿಕತೆಗೆ ಮೊಟ್ಟೆ, ಬಾಳೆಹಣ್ಣು, ವಿತರಣೆಯ ಪೋಷಣ್ ಶಕ್ತಿ ಕಾರ್ಯಕ್ರಮ ಜು.27 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ವಾರದಲ್ಲಿ ಎರಡು ಬಾರಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ನೀಡಲು ಸರ್ಕಾರ ಆದೇಶಿಸಿದ್ದು ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ವನ್ನು ಸ್ಥಳೀಯ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡಂಕೇರಿ ಉದ್ಘಾಟಿಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪೋಷಣ್ ಸಮಿತಿಯನ್ನು ರಚಿಸಲಾಯಿತು. ಮುಖ್ಯ ಶಿಕ್ಷಕಿ ವೀಣಾ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಕ ತೀರ್ಥರಾಮ ಅಡಕಬಳೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಪೋಷಕ ವೃಂದದವರು, ಶಿಕ್ಷಕರು, ಅಕ್ಷರ ದಾಸೋಹ ಸಿಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.