ಗುತ್ತಿಗಾರು ಪೇಟೆಯಲ್ಲಿ ಅಂಗಡಿಗಳಿಗೆ ಹಾನಿ
ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿರುವ ವಿಷಯ ತಿಳಿಯುತ್ತಿದ್ದಂತೆ ಗುತ್ತಿಗಾರು ಪೇಟೆಯಲ್ಲಿ ಗಲಾಟೆ ಆರಂಭವಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳಿಗೆ ನುಗ್ಗಿ ವಸ್ತುಗಳನ್ನು ರಸ್ತೆಗೆ ಎಸೆಯುತ್ತಿದ್ದಾರೆ. ಸುಮಾರು 50ಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಮುಸ್ಲಿಂ ವ್ಯಾಪಾರಿಗಳ 4-5 ಅಂಗಡಿಗಳಿಗೆ ನುಗ್ಗಿ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.