ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಡಿ.ವಿ ಸದಾನಂದ ಗೌಡ ಭೇಟಿ
ಸರಕಾರ ಇನ್ನಷ್ಟು ದಿಟ್ಟ ಕ್ರಮ ತೆಗೆದುಕೊಳ್ಳಬೇಕಿತ್ತು : ಡಿ.ವಿ.ಎಸ್.
ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಮಾಜಿ ಕೇಂದ್ರ ಸಚಿವ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು.
ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರೈ ಎಸ್ಟೇಟ್ & ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್.ರೈ ಕೋಡಿಂಬಾಡಿ,ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್.ರೈ ಬಾಲ್ಯೊಟ್ಟು,ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ,ಕಾರ್ಯದರ್ಶಿ ಶ್ರೀನಾಥ್ ಬಾಳಿಲ,ಸುಳ್ಯ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,ಮಾಜಿ ಪುತ್ತೂರು ಎಪಿಯಂಸಿ ಅಧ್ಯಕ್ಷ ದಿನೇಶ್ ಮೆದು,ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಅವರು”ನಮ್ಮದೇ ಸರ್ಕಾರ ಇದ್ರು ಆ್ಯಕ್ಷನ್ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಎಂಬ ಆರೋಪ ಇದೆ. ಸರಕಾರ ಇನ್ನಷ್ಟು ದಿಟ್ಟ ಕ್ರಮ ತೆಗೆದುಕೊಳ್ಳಬೇಕಿತ್ತು. ಬೆದರಿಕೆ ಇದದ್ದರೂ ಪೊಲೀಸರಿಗೆ ತಿಳಿಸಿದ್ರು ಕ್ರಮ ಕೈಗೊಂಡಿಲ್ಲ. ಹೀಗಿದ್ರೆ ಇದು ಒಂದು ಗಂಭೀರ ವಿಚಾರ “ಎಂದು ಹೇಳಿದರು.