೭೫ನೇ ಸ್ವಾತಂತ್ಯ್ರದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ವತಿಯಿದ ನಡೆಸಲ್ಪಡುತ್ತಿರುವ ವಿವಿಧ ಸ್ಪರ್ಧೆಗಳಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ, ಕಿರುನಾಟಕ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜು. ೨೬ರಂದು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಘಟಕ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪೂರ್ಣಪ್ರಜ್ಞಾ ಕಾಲೇಜು ಉಡುಪಿಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಇವರಿಗೆ ರಂಗಮಯೂರಿ ಕಲಾಶಾಲೆಯ ಲೋಕೇಶ್ ಊರುಬೈಲು ತರಬೇತಿ ನೀಡಿದರು. ಕಾಲೇಜಿನ ಉಪನ್ಯಾಸಕರಾದ ಮಧುರಾ ಎಂ.ಆರ್ ಹಾಗೂ ವಿಷ್ಣು ಪ್ರಶಾಂತ್ ಬಿ, ಸಹಕರಿಸಿದರು. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದರು.