ಅಗಸ್ಟ್ 6 ರಂದು ಸುಳ್ಯ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿ ಅಂಗವಾಗಿ ಸುಳ್ಯ ತಾಲೂಕಿನ ಕೆನರಾ ಬ್ಯಾಂಕ್ ನಿಂದ ಸಾಲ ಪಡೆದಿರುವ ಗ್ರಾಹಕರಿಗೆ ಅದಾಲತಿಗೆ ಅವಕಾಶವಿದ್ದು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಕೆನರಾ ಬ್ಯಾಂಕ್ ಪ್ರಧಾನ ಕಚೇರಿ ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗಸ್ಟ್ 6 ರಂದು ಬೆಳಿಗ್ಗೆ 9:30ರಿಂದ ಸಂಜೆ 4.00 ಗಂಟೆ ವರೆಗೆ ಅದಾಲತ್ ನಡೆಯಲಿದ್ದು ಸುಳ್ಯ ತಾಲೂಕಿನ ಕೆನರಾ ಬ್ಯಾಂಕ್ ಗೆ ಸಂಬಂಧಪಟ್ಟ ಸಾಲ ಪಡೆದು ಇತ್ಯರ್ಥ ಪಡಿಸಿಕೊಳ್ಳುವವರು ಇದರ ಸದುಪಯೋಗ ಪಡೆದುಕೊಳ್ಳಬಹುದೆಂದು ಬ್ಯಾಂಕ್ ವತಿಯಿಂದ ತಿಳಿಸಿದ್ದಾರೆ.
ಈ ಅದಾಲತ್ ನಲ್ಲಿ ಕೆನರಾ ಬ್ಯಾಂಕಿನ ಪ್ರಧಾನ ಕಚೇರಿ ಪುತ್ತೂರಿನಿಂದ ಅಧಿಕಾರಿಗಳು ಭಾಗವಹಿಸಲಿದ್ದು ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶರ ಸಮ್ಮುಖದಲ್ಲಿ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.