Breaking News

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ರೈಯವರಿಗೆ ಬೀಳ್ಕೊಡುಗೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ರೈ ಯವರು ಜು.30ರಂದು ತಮ್ಮ‌ ಸೇವೆಯಿಂದ‌ ನಿವೃತ್ತಿಗೊಂಡಿದ್ದು, ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಇಂದು (ಜು.30)ರಂದು‌ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ವಹಿಸಿದ್ದರು.
ಈ ಸಂದರ್ಭದಲ್ಲಿ ನೆಲ್ಲೂರು ಕೆಮ್ರಾಜೆ ಸೊಸೈಟಿಯಲ್ಲಿ ಕಳೆದ 24 ವರ್ಷಗಳಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಜಗನ್ನಾಥ ಶೆಟ್ಟಿಯವರನ್ನು ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ, ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿಯವರ ಹಿತೈಷಿಗಳಾದ ಅಮೃತಕುಮಾರ್ ರೈ, ಓಂ ಪ್ರಕಾಶ್ ಕಜೆ, ದಿವಾಕರ ನಾಯಕ್ ಎರ್ಮೆಟ್ಟಿ, ಶುಭಾಶ್ಚಂದ್ರ ನಾಯಕ್ ಮತ್ತಿತರರು ಮೆಚ್ಚುಗೆಯ ಮಾತುಗಳನ್ನಾಡಿದರು.‌ ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.‌
ಜೀವನ್ ಪುನ್ಕುಟ್ಟಿ ಸನ್ಮಾನಿತರ ಪರಿಚಯ ವಾಚಿಸಿದರು. ಉಪಾಧ್ಯಕ್ಷ ಜಯಪ್ರಸಾದ್ ಸುಳ್ಳಿ ವಂದಿಸಿದರು.
ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾರ್ಣಕಜೆ ಕಾರ್ಯಕ್ರಮ ನಿರೂಪಿಸಿದರು.
ಜಗನ್ನಾಥ ಶೆಟ್ಟಿ ಯವರು ತಮ್ಮ‌ ಸೇವೆಯ ನೆನಪಿಗೆ ದೀಪವನ್ನು ಸೊಸೈಟಿ ಗೆ ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಸೊಸೈಟಿ ಸದಸ್ಯರು, ಜಗನ್ನಾಥ ರವರ ಹಿತೈಷಿಗಳು, ಮನೆಯವರು, ಬಂದು ಮಿತ್ರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.