Breaking News

ಗುತ್ತಿಗಾರು: ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ 1837 ಉಪನ್ಯಾಸ ಮಾಲಿಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ದಿನಾಚರಣೆಯ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ಕಾರ್ಯಕ್ರಮವು ಗುತ್ತಿಗಾರು ‌ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜು.30ರಂದು ನಡೆಸಲಾಯಿತು.

ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ ಪಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕ ಎ.ಕೆ. ಹಿಮಕರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ನೆಲ್ಸನ್ ಕ್ಯಾಸ್ಟಲಿನೊ, ನವಚೇತನ ಯುವಕ ಮಂಡಲದ ಉಪಾಧ್ಯಕ್ಷ, ಕುಕ್ಕನ್ನೂರು ಚೆನ್ನಯ್ಯ ಗೌಡರ ವಂಶಸ್ಥ ವೆಂಕಟೇಶ್ ನಡುಬೆಟ್ಟು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ನವಚೇತನ ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯುವಕ ಮಂಡಲದ ಜೊತೆ ಕಾರ್ಯದರ್ಶಿ ಪ್ರವೀಣ ಕಾಟೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪದಾಧಿಕಾರಿಗಳಾದ ಸುಭಾಷ್ ರೈ ಕುಕ್ಕಂದೂರು, ನಿತಿನ್ ಕುಮಾರ್ ಅರ್ಭಡ್ಕ, ಲಕ್ಷ್ಮೀನಾರಾಯಣ ಬೊಳುಬೈಲು ಹಾಗೂ ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.