Breaking News

ಮುಕ್ಕೂರು : ಶಾಲಾ ಗ್ರಂಥಾಲಯಕ್ಕೆ 500 ಪುಸ್ತಕ ಹಸ್ತಾಂತರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದ.ಕ.ಜಿಲ್ಲಾ ಗ್ರಂಥಾಲಯದಿಂದ ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಗ್ರಂಥಾಲಯಕ್ಕೆ ಕೊಡ ಮಾಡಿದ 500 ಪುಸ್ತಕಗಳ ಹಸ್ತಾಂತರ ಕಾರ್ಯಕ್ರಮ ಜು.30 ರಂದು ನಡೆಯಿತು.

ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಪುಸ್ತಕ ದೊರಕಿದ್ದು ಸಾಹಿತ್ಯ, ನಾಗರಿಕ ಪರೀಕ್ಷೆಗೆ ತೊಡಗಿಸಲು ಪೂರಕವಾದ ಪುಸ್ತಕ ಇದಾಗಿದೆ. ವಿದ್ಯಾರ್ಥಿಗಳ ಬೌದ್ಧಿಕ ಪ್ರಗತಿಗೆ ಅನುಕೂಲಕರ ಪುಸ್ತಕ ಇದ್ದು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ.

ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅವರು ಶಾಲಾ ಮುಖ್ಯಗುರು ವಸಂತಿ ಅವರಿಗೆ ಪುಸ್ತಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಎಸ್ ಡಿಎಂಸಿ‌ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಶಾಲಾ ಹಿತ ಚಿಂತನಾ ಸಮಿತಿ ಕೋಶಾಧಿಕಾರಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಶಾಲಾ ಎಸ್ಬಡಿಎಂಸಿ‌ ಉಪಾಧ್ಯಕ್ಷೆ ಸುಮತಿ ರೈ, ಮಾಜಿ‌ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.