ವಿನೋಬನಗರ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಗೌರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳದ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ.ಜಿಲ್ಲಾ ಮಟ್ಟದ ಚದುರಂಗ ಪಂದ್ಯಾಟದಲ್ಲಿ ವಿನೋಬನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಗೌರಿ ಕೆ. ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗೌರಿ ಅವರು ಜ್ಞಾನದೀಪ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚದುರಂಗ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಇವರು ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲೆ ಪಾಪೆಮಜಲು ಇಲ್ಲಿನ ಗಣಿತ ಶಿಕ್ಷಕ ಹಾಗೂ ಚದುರಂಗ ತರಬೇತುದಾರರಾದ ಹರಿಪ್ರಸಾದ್ ಕೊಯಿಂಗಾಜೆ ಮತ್ತು ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಶ್ರೀಮತಿ ಶ್ರೀವಿದ್ಯಾ ಕೊಯಿಂಗಾಜೆ ದಂಪತಿಗಳ ಪುತ್ರಿ.