ಬಿಜೆಪಿ ಕಾರ್ಯಕರ್ತನಿಗೇ ರಕ್ಷಣೆ ಕೊಡದವರು ಬೇರೆಯವರಿಗೆ ಕೊಡುತ್ತಾರೆಯೇ?
ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
ಪ್ರವೀಣ್ ಹತ್ಯೆ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ರಾಜ್ಯದಲ್ಲಿ ಇಂಟಲಿಜೆನ್ಸ್ ಸಂಪೂರ್ಣ ವಿಫಲಗೊಂಡಿದ್ದು, ಅದಕ್ಕಾಗಿಯೇ ಈ ಪ್ರಕರಣವನ್ನು ಎನ್ಐಎ ಗೆ ಒಪ್ಪಿಸಿದ್ದಾರೆ ಎಂದು ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಇರುವಾಗ ಇವರೆಲ್ಲಾ ದಿನಾ ಭಾಷಣ ಹೊಡೀತಾ ಇದ್ರು. ಈಗ ಅವರದೇ ಪಕ್ಷದ ಕಾರ್ಯಕರ್ತನಿಗೆ ರಕ್ಷಣೆ ಕೊಡದವರು ಬೇರೆಯವರಿಗೆ ರಕ್ಷಣೆ ಕೊಡುತ್ತಾರೆಯೇ? ಕೇವಲ ಮೊಸಳೆ ಕಣ್ಣೀರು ಸುರಿಸಿ ಪ್ರಯೋಜನವಿಲ್ಲ ಎಂದು ಅವರು ಹೇಳಿದರು.