ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

0

 

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ‌ ಬ್ಯಾಂಕ್ ಪ್ರಶಸ್ತಿ ಲಭಿಸಿದೆ.

 

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಮತ್ತು ನಿವೃತ್ತ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿಯವರನ್ನು ಪ್ರಶಸ್ತಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾರ್ಣಕಜೆ, ನಿರ್ದೇಶಕ ರಾದ ದೇವಿಪ್ರಸಾದ್ ಸುಳ್ಳಿ, ಹರ್ಷಿತ್ ಟಿ., ಸಿಬ್ಬಂದಿ ಚನಿಯಪ್ಪ ಚೆನ್ನಡ್ಕ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here