ಅಜ್ಜಾವರ ಪ್ರೌಢ ಶಾಲೆಯಲ್ಲಿ ದೇಶ ಭಕ್ತಿ ಗೀತೆ ಗಾಯನ

0

 

 

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ಸರಣಿ 7ನೇ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು.
ಅಜ್ಜಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ್ ಉದ್ಘಾಟಿಸಿ
“ದೇಶಭಕ್ತಿ ಗೀತೆ ಗಾಯನ ಅಭಿಯಾನದ ಮೂಲಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ನಮ್ಮ ದೇಶ-ಸಂಸ್ಕೃತಿಯ ಬಗ್ಗೆ ಅಭಿಮಾನವನ್ನು ಹೆಚ್ಚಿಸುತ್ತಿರುವ ಸಾಹಿತ್ಯ ಪರಿಷತ್ತಿನ ಕಾರ್ಯವನ್ನು ಶ್ಲಾಘಿಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಜಯರಾಮ , ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ , ಎಸ್.ಡಿ. ಎಂ.ಸಿ ಸದಸ್ಯ ಯಾಕುಬ್, ಯುವಕ ಮಂಡಲ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಮೇದಿನಡ್ಕ,ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ,ಭಾವನಾ ಸುಗಮ ಸಂಗೀತ ಬಳಗದ ನಿರ್ದೇಶಕ, ಗಾಯಕ ಕೆ.ಆರ್.ಗೋಪಾಲಕೃಷ್ಣ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಸದಸ್ಯ ರಾಮಚಂದ್ರ ಪಲ್ಲತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಶ್ವಿತಾ ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಸ್ವಾಗತಿಸಿದರು.ಸಹ ಶಿಕ್ಷಕ ಚಂದ್ರಶೇಖರ್ ಭಟ್ ಕಾರ್ಯಕ್ರಮ ನಿರೂಪಿಸಿದರು.