ನಾಳೆ ಜಾಲ್ಸೂರಿನಿಂದ ವಿನೋಬನಗರದ ತನಕ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಕಾಲ್ನಡಿಗೆ ತಿರಂಗಾ ಯಾತ್ರೆ

0

 

ಸಚಿವ ಎಸ್. ಅಂಗಾರರಿಂದ ತಿರಂಗಾ ಯಾತ್ರೆಗೆ ಚಾಲನೆ – ತಹಶೀಲ್ದಾರ್ ಉಪಸ್ಥಿತಿ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಕಾಲ್ನಡಿಗೆಯ ತಿರಂಗಾ ಯಾತ್ರೆಯು ಜಾಲ್ಸೂರಿನಿಂದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯವರೆಗೆ ಆ.13ರಂದು ಬೆಳಿಗ್ಗೆ ಜರುಗಲಿದೆ.

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಆ.13ರಿಂದ ಆ.15ರವರೆಗೆ “ಹರ್ ಘರ್ ತಿರಂಗಾ” ಅಭಿಯಾನವನ್ನು ಕೈಗೊಂಡಿದ್ದು, ಮೊದಲ ದಿನವಾದ ನಾಳೆ ಬೆಳಿಗ್ಗೆ 10ಕ್ಕೆ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ವಠಾರದಲ್ಲಿ ತಿರಂಗಾ ಯಾತ್ರೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ
ಅವರು ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ತಹಶಿಲ್ದಾರ್ ಕು. ಅನಿತಾಲಕ್ಷ್ಮಿ, ವಿವೇಕಾನಂದ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ. ಸೀತಾರಾಮ, ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಸೇರಿದಂತೆ ಗಣ್ಯ ಅತಿಥಿಗಳು ಉಪಸ್ಥಿತರಿರಲಿದ್ದಾರೆ.
ವಿದ್ಯಾರ್ಥಿಗಳಿಂದ ಕಾಲ್ನಡಿಗೆಯಲ್ಲಿ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸಭಾಭವನದಿಂದ ಆರಂಭಗೊಳ್ಳುವ ತಿರಂಗಾ ಯಾತ್ರೆಯು ಜಾಲ್ಸೂರು, ಅಡ್ಕಾರು ದಾರಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ವಿನೋಬನಗರದ ವಿದ್ಯಾಸಂಸ್ಥೆಯ ಆವರಣದಲ್ಲಿ ಸಮಾಪನಗೊಳ್ಳಲಿದೆ.