ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ಪದವಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

0

 

2021-22 ನೇ ಸಾಲಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ 1೦೦%, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ 1೦೦%, ಮೆಕ್ಯಾನಿಕಲ್ ಇಂಜಿನಿಯರಿಂಗ್ 1೦೦%, ಸಿವಿಲ್ ಇಂಜಿನಿಯರಿಂಗ್ 91 %

ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್, ಸುಳ್ಯ ಇಲ್ಲಿ ಉನ್ನತ ಗುಣಮಟ್ಟದ, ಮೌಲ್ಯಾಧಾರಿತ ಶಿಕ್ಷಣಕ್ಕೆ, ಪರಿಣಾಮಕಾರಿ ಬೋಧನೆಗೆ, ಅತ್ಯಾಧುನಿಕ ತಂತ್ರಜ್ಞಾನಕ್ಕೆ ಮತ್ತು ಒತ್ತಡರಹಿತ ಕಲಿಕಾ ವಾತಾವರಣಕ್ಕೆ ಆದ್ಯತೆ ನೀಡಲಾಗಿರುವುದರಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಿದೆ. ಉತ್ತಮ ಫಲಿತಾಂಶ ಪಡೆದ ವಿದ್ಯಾಥಿಗಳನ್ನು
ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್. ಅಭಿನ೦ದಿಸಿದ್ದಾರೆ.
೨೦೨೨-೨೩ನೇ ಸಾಲಿನ ಅಡ್ಮಿಶನ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಇಂಜಿನಿಯರಿಂಗ್ ವಿಭಾಗಗಳಾದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಆರ್‌ಟಿಫಿಶಿಯಲ್ ಇನ್‌ಟೆಲಿಜೆನ್ಸ್ & ಮೆಶಿನ್ ಲರ್ನಿಂಗ್) ಎಂಬ ಕೋರ್ಸ್‌ಗಳಿಗೆ ದಾಖಲಾತಿ ಪ್ರಾರಂಭಗೊಂಡಿರುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.